ಉಗ್ರರ ದಾಳಿಗೆ ಭಯಪಟ್ಟು ಪಾಕ್‌ ಸೇನೆ ತೊರೆಯುತ್ತಿದ್ದಾರೆ ಯೋಧರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಲೂಚಿಸ್ತಾನ ಸೇರಿದಂತೆ ಪಾಕಿಸ್ತಾನದ ಅನೇಕ ಕಡೆಗಳಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕರ ದಾಳಿಯಿಂದ ಪಾಕ್ ಯೋಧರು ಸೇನೆಗೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.

ಒಂದೇ ವಾರದಲ್ಲಿ 2500ಕ್ಕೂ ಹೆಚ್ಚು ಸೈನಿಕರು ರಾಜೀನಾಮೆ ನೀಡಿದ್ದಾರೆಂದು ಮಾಧ್ಯಮಗಳು ವರದಿ ಮಾಡಿವೆ. ಈ ವಿಚಾರದ ಬಗ್ಗೆ ಪಾಕ್‌ ಸರ್ಕಾರ ಅಧಿಕೃತ ಮಾಹಿತಿ ನೀಡಿಲ್ಲ.

ಬಲೂಚಿಸ್ತಾನ, ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ – ಬಲೂಚಿಸ್ತಾನ ಲಿಬರೇಷನ್ ಆರ್ಮಿ ಬಂಡುಕೋರರು ಸೇನೆಯನ್ನು ಗುರಿಯಾಗಿಸಿಕೊಂಡು ನಿರಂತರ ದಾಳಿ ನಡೆಸುತ್ತಲೇ ಇದ್ದಾರೆ. ಈ ದಾಳಿಗಳಿಂದ ಭಾರೀ ಸಂಖ್ಯೆಯಲ್ಲಿ ಸೈನಿಕರು ಮೃತಪಟ್ಟಿರುವುದೇ ಇತರರು ರಾಜೀನಾಮೆ ನೀಡಲು ಕಾರಣ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!