ಕೇಂದ್ರ ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು ಐಎಎಸ್ ಅಧಿಕಾರಿ ಟಿವಿ ಸೋಮನಾಥನ್ ಅವರನ್ನು ಸಂಪುಟ ಕಾರ್ಯದರ್ಶಿಯಾಗಿ ನೇಮಿಸಿದೆ.

ಟಿ.ವಿ.ಸೋಮನಾಥನ್‌ ಅವರು ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ .

ಸಂಪುಟ ಸಮಿತಿಯು ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇದುವರೆಗೆ ಅವರು ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರಿಗೆ ಪದೋನ್ನತಿ ನೀಡಲಾಗಿದೆ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ 5 ವರ್ಷಗಳಿಂದಲೂ ರಾಜೀವ್‌ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹುದ್ದೆಗೆ ಸೋಮನಾಥನ್‌ ಅವರನ್ನು ನೇಮಿಸಲಾಗಿದೆ. ಇವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!