ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಯನ್ನು ಲೆಕ್ಕಿಸದೆ ತಮ್ಮ ಅಭಿವೃದ್ಧಿ ಮಾಡಿಕೊಂಡಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಅಭಿವೃದ್ಧಿಗೆ ನನ್ನ ಮತ ಎಂದು ಎಸ್.ಟಿ.ಸೋಮಶೇಖರ್ ಹೇಳಿದ ಬೆನ್ನಲ್ಲೇ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಆಗಿಲ್ಲ ಅಂತ ಅಲ್ವ ನೀವು ಬಿಜೆಪಿಗೆ ಬಂದಿದ್ದು. ಅಭಿವೃದ್ಧಿಗಾಗಿ ಮತ ಹಾಕುತ್ತೇವೆ ಎಂದು ಹೇಳಿದ್ದೀರಲ್ಲ. ನಿಮ್ಮ ಕ್ಷೇತ್ರವು ಅಭಿವೃದ್ಧಿಗೊಂಡಿದೆಯೇ? ಎಂದು ವಾಗ್ದಾಳಿ ನಡೆಸಿದರು.