ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಂತು ಬಾಂಬ್ ಬೆದರಿಕೆ ಇ-ಮೇಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.

ಬಿಎಂಎಸ್​​ ಕಾಲೇಜು, ವಿ.ವಿ.ಪುರಂನಲ್ಲಿರುವ ಬಿಐಟಿ​ ಕಾಲೇಜು ಸೇರಿದಂತೆ ಕೆಲವು ಕಾಲೇಜುಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಪತ್ರ ಬಂದಿದೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕಿಯ ಸಿಬ್ಬಂದಿ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಸೆ.28 ರಂದು ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ ಹಾಗೂ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಹೋಟೆಲ್ ಒಟೆರಾ ಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದರು. ಇದಾದ ಆರು ದಿನಗಳ ಬಳಿಕ ಬೆಂಗಳೂರಿನ ಕೆಲವು ಕಾಲೇಜುಗಳಿಗೆ ಇ-ಮೇಲ್ ಮುಖಾಂತರ ಬಾಂಬ್​ ಬೆದರಿಕೆ ಬಂದಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!