ಸಿಎಂ ಸ್ಥಾನಕ್ಕಾಗಿ ಕೆಲವರು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕುರಿತು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಕೆಲವರು ಸಿಎಂ ಸ್ಥಾನಕ್ಕಾಗಿ ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ.ಇದರಲ್ಲಿ ಕಾಂಗ್ರೆಸ್​ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ ಎಂದು ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್​ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!