ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್ಸಿಎಲ್ ಇದೀಗ ತಾತ್ಕಾಲಿಕ ಬ್ರೇಕ್ ಹಾಕಿದೆ. ಮೆಟ್ರೋ ಟಿಕೆಟ್ ದರ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್ಸಿಎಲ್ ಸಭೆ ನಡೆಸಿತ್ತು. ಆದರೆ, ಇದಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎನ್ನಲಾಗಿದೆ.
ಕರ್ನಾಟಕದಲ್ಲಿ ಈಗಾಗಲೇ ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳವಾಗಿದೆ. ಈ ಸಂದರ್ಭದಲ್ಲಿ ಮತ್ತೆ ಮೆಟ್ರೋ ಟಿಕೆಟ್ ದರ ಕೂಡ ಹೆಚ್ಚಳವಾದರೆ ಜನರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ. ಹೀಗಾಗಿ ವರದಿ ಸಲ್ಲಿಕೆಗೆ ಬಿಎಂಆರ್ಸಿಎಲ್ ಸಮಯ ಕೇಳಿದೆ ಎನ್ನಲಾಗಿದೆ.