ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ (Bengaluru Mysuru Expressway) ದ್ವಿಚಕ್ರ, ತ್ರಿಚಕ್ರ ಸೇರಿದಂತೆ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ.
ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಎಕ್ಸ್‌ಪ್ರೆಸ್ ವೇನಲ್ಲಿ ಜುಲೈ 12ರಂದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ.
ಮೋಟರ್ ಸೈಕಲ್ (ಸ್ಕೂಟರ್ ಮತ್ತು ಇತರೆ ದ್ವಿಚಕ್ರವಾಹನ), ತ್ರಿಚಕ್ರವಾಹನ (ಆಟೋ ರಿಕ್ಷಾ ಸೇರಿದಂತೆ) , ಮೋಟಾರು ರಹಿತ ವಾಹನಗಳು , ಟ್ರಾಕ್ಟರ್‌ಗಳು, ಮಲ್ಟಿ ಆಕ್ಸೇಲ್ಹೈ, ಡ್ರಾಲಿಕ್ ವಾಹನಗಳು, ಕ್ವಾಡ್ರಿ ಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ.
ವೇಗದ ಮಿತಿ 100 ಕಿಮೀ
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುವ ವಾನಗಳಿಗೆ ಗಂಟೆಗೆ 80ರಿಂದ 100 ಕಿಲೋಮೀಟರ್ ವೇಗದ ಮಿತಿ ನಿಗದಿಪಡಿಸಲಾಗಿದೆ. ಈ ಕುರಿತೂ ಹೆದ್ದಾರಿ ಪ್ರಾಧಿಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.