ಯಾರಾದರೂ ರಸ್ತೆ ದುರಸ್ತಿ ಮಾಡಿಸ್ರಪ್ಪಾ: ಕಂದಾಯ ಸಚಿವರ ಅಸಹಾಯಕ ಟ್ಟೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್​​ ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ ಎಂದು ಕೃಷ್ಣಭೈರೇಗೌಡ ಟ್ವೀಟ್​​​ನಲ್ಲಿ ಉಲ್ಲೇಖಿಸಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಮಾಡಿರುವ ಟ್ವೀಟ್ ಹಲವು ಸಂದೇಹಗಳಿಗೆ ಕಾರಣವಾಗಿದೆ, ಡಿಸಿಎಂ ಡಿ.ಕೆ ಶಿವಕುಮಾರ್ ಬ್ರ್ಯಾಂಡ್​​​ ಬೆಂಗಳೂರು ಎಂದು ಭಾಷಣ ಮಾಡುತ್ತಿದ್ದರೆ,ಇತ್ತ ಅವರದ್ದೇ ಸರ್ಕಾರದ ಸಚಿವರು ನೇರವಾಗಿ ಬೆಂಗಳೂರಿನ ರಸ್ತೆ ಸಮಸ್ಯೆ ಬಗ್ಗೆ ಹೇಳಿಕೊಳ್ಳಲಾಗದೆ ಈ ರೀತಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪ್ರಕಟಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!