ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ಹಿರಿಯ ನಟಿ ತನ್ನ ಮಗ , ಸೊಸೆ ವಿರುದ್ಧ ಕಿರುಕುಳ ಆರೋಪ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ನಿರ್ದೇಶಕ ದಿವಂಗತ ಸಿದ್ಧಲಿಂಗಯ್ಯ ಅವರ ಪತ್ನಿ ಹಾಗೂ ಹಿರಿಯ ನಟಿ ಶ್ಯಾಮಲಾದೇವಿ ಅವರು, ಇಂದು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ, ತಮ್ಮ ಪುತ್ರ ಹಾಗೂ ಸೊಸೆಯ ವಿರುದ್ಧ ಕಿರುಕುಳದ ದೂರು ನೀಡಿದ್ದಾರೆ.
ಆಸ್ತಿಗಾಗಿ ತಮ್ಮ ಮಗ ಹಾಗೂ ಸೊಸೆ ಕಳೆದ 5 ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ , ನನಗೆ ರಕ್ಷಣೆ ನೀಡಿ ಎಂದು ಕಣ್ಣೀರಿಡುತ್ತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ, ದಿನದಿತ್ಯ ಅಗತ್ಯ ವಸ್ತುಗಳನ್ನು ನೀಡದೇ ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.ನಟಿ ನೀಡಿದ ದೂರಿನ ಆಧಾರದ ಮೇಲೆ ಅವರ ಪುತ್ರ ಹಾಗೂ ಸೊಸೆಯ ವಿರುದ್ಥ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.