ಮಗ ಜಗನ್​ಮೋಹನ್​ ರೆಡ್ಡಿ ಪಕ್ಷಕ್ಕೆ ಕೈಕೊಟ್ಟು, ಮಗಳ ಪರ ‘ ಜೈ’ ಎಂದ ವಿಜಯಮ್ಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಂಧ್ರ ಪ್ರದೇಶದ ವೈಎಸ್​ಆರ್​ ಕಾಂಗ್ರೆಸ್​​ ಪಕ್ಷದಲ್ಲಿ ಮಹತ್ವದ ಬೆಳವಣಿಗೆ ಹೊಂದಿದೆ. ಪಕ್ಷದ ಗೌರವಾಧ್ಯಕ್ಷೆ ಸ್ಥಾನಕ್ಕೆ ಮುಖ್ಯಮಂತ್ರಿ ವೈ.ಎಸ್​.ಜಗನ್​ಮೋಹನ್​ ರೆಡ್ಡಿ ಅವರ ತಾಯಿ ವೈ.ಎಸ್.ವಿಜಯಮ್ಮ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಚಿನಕಾಕಣಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ವೈ.ಎಸ್.ವಿಜಯಮ್ಮ ಈ ಮಹತ್ವದ ಘೋಷಣೆ ಮಾಡಿದ್ದು,’ನನ್ನಿಂದ ಯಾರಿಗೂ ಯಾವುದೇ ಅಭ್ಯಂತರ ಉಂಟಾಗಬಾರದು ಎಂದು ನಾನು ರಾಜೀನಾಮೆ ನೀಡುವ ನಿರ್ಣಯ ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿ’ ಎಂದೂ ತಿಳಿಸಿದ್ದಾರೆ.
ಇತ್ತ ಮಗನ ಪಕ್ಷಕ್ಕೆ ರಾಜೀನಾಮೆ ನೀಡಿ, ಮಗಳು ಶರ್ಮಿಳಾ ತೆಲಂಗಾಣದಲ್ಲಿ ಕಟ್ಟಿದ ಹೊಸ ಪಕ್ಷಕ್ಕೆ ಬೆಂಬಲಿಸಿಸಲು ಈ ನಿರ್ಧಾರ ಕೈಗೊಂಡಿದ್ದಾರೆ.
ದಿ.ವೈ.ಎಸ್​.ರಾಜಶೇಖರ ರೆಡ್ಡಿ ಪತ್ನಿಯಾಗಿ ಮತ್ತು ಶರ್ಮಿಳಾ ತಾಯಿಯಾಗಿ ನಾನು ತೆಲಂಗಾಣದಲ್ಲಿ ಹೊಸ ಪಕ್ಷದ ಪರವಾಗಿ ನಿಲ್ಲುವ ಅವಶ್ಯಕತೆ ಇದೆ. ಇಂದು ಜಗನ್​ ಮತ್ತು ಶರ್ಮಿಳಾ ಬೇರೆ – ಬೇರೆ ಪಕ್ಷಗಳು ಮತ್ತು ರಾಜ್ಯಗಳನ್ನು ಪ್ರತಿನಿಧಿಸುವ ಅನಿರ್ವಾಯತೆ ಯಾಕೆ ಬಂದಿದೆ ಆ ದೇವರಿಗೆ ಗೊತ್ತು. ಕಷ್ಟದಲ್ಲಿದ್ದಾಗ ನಾನು ಜಗನ್​ ಜೊತೆಗಿದ್ದೆ, ಸಂತೋಷವಾಗಿದ್ದಲೂ ನಾನು ಆತನ ಜೊತೆಗಿದ್ದರೆ ನನ್ನ ಮಗಳು ಶರ್ಮಿಳಾಗೆ ಅನ್ಯಾಯ ಮಾಡುತ್ತಿದ್ದೇನೆ ಎಂದು ನನ್ನ ಮನಸಾಕ್ಷಿ ಹೇಳುತ್ತಿದೆ ಎಂದು ವಿಜಯಮ್ಮ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!