Sunday, August 14, 2022

Latest Posts

ಲಕ್ಷ್ಮಣ್ ಸವದಿ ಸಹೋದರನ ಪುತ್ರ ಕೊರೋನಾ ಸೋಂಕಿಗೆ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರ ಸಹೋದರ ಪರಪ್ಪ ಅವರ ಪುತ್ರ  ವಿನೋದ್ ಸವದಿ (36) ಅವರು ಇಂದು ಬೆಳಗಿನ ಜಾವ ಬೆಳಗಾವಿಯಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ವಿನೋದ್ ಅವರು ಬೆಳಗಾವಿ ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಯುವ ಮುಖಂಡರಾಗಿದ್ದರು.

ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ವಿನೋದ್ ಅವರು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಕಿಟ್ ಉಚಿತವಾಗಿ ಹಂಚಿಕೆ ಮಾಡುವುದರಲ್ಲಿ ಮತ್ತು ಇತರ ಸಾಮಾಜಿಕ ಕೆಲಸಗಳಲ್ಲಿಯೂ ಕೆಲಸ ಮಾಡಿದ್ದರು.

ಲಕ್ಷ್ಮಣ್ ಸವದಿ ಸಂತಾಪ..
ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಲಕ್ಷ್ಮಣ್ ಸವದಿ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss