July 21, 2026
Tuesday, July 21, 2026
spot_img

ಪುತ್ರನಿಗೆ ಶಸ್ತ್ರಚಿಕಿತ್ಸೆ: ಶಾಸಕ ವಿನಯ್‌ ಕುಲಕರ್ಣಿಗೆ 2 ದಿನಗಳ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಯೋಗೀಶಗೌಡ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಮಗ ಹೇಮಂತ್ ಗೆ ಅಪಘಾತವಾಗಿದ್ದರಿಂದ ಆತನ ಕಾಲಿನ ಶಸ್ತ್ರಚಿಕಿತ್ಸೆ ಮಾಡಿಸುತ್ತಿದ್ದು ತಮಗೆ ಜಾಮೀನು ನೀಡಬೇಕು ಎಂದು ಕೋರಿ ಶಾಸಕ ವಿನಯ್ ಮರಳಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪುರಸ್ಕರಿಸಿರುವ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿಗೆ ಕೇವಲ ಎರಡು ದಿನಗಳವರೆಗೆ ಮಾತ್ರ ಜಾಮೀನು ಮಂಜೂರು ಮಾಡಿದೆ. ಮರಳಿ ವಿನಯ್ ಕುಲಕರ್ಣಿ ಸೆ.11ರ ಸಂಜೆ 5ಕ್ಕೆ ಸಿಬಿಐ ಅಧಿಕಾರಿಗಳ ಎದುರು ಹಾಜರಾಗಿ ಮರಳಿ ಜೈಲು ಸೇರಬೇಕಿದೆ.

ವಿನಯ್ ಕುಲಕರ್ಣಿ ಪುತ್ರ ಹೇಮಂತ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಬೆಂಗಳೂರಿನಲ್ಲೇ ನಡೆಯುವುದರಿಂದ ವಿನಯ್ ಅವರು ಬೆಂಗಳೂರಿನಲ್ಲೇ ಉಳಿಯಬೇಕಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !