ಸೋನಾಲಿ ಫೋಗಟ್ ಸಾವಿನ ಪ್ರಕರಣ: ಬಿಜೆಪಿ ನಾಯಕಿ ತಂಗಿದ್ದ ಹೋಟೆಲ್​ಗೆ ಸಿಬಿಐ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ತಂಡವು ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಿಸಲು ಬಿಜೆಪಿ ನಾಯಕಿ ಮತ್ತು ಆಕೆ ಜೊತೆಗೆ ತಂಗಿದ್ದ ಸ್ನೇಹಿತರ ಗೋವಾದ ಹೋಟೆಲ್‌ನ ಕೊಠಡಿಗಳನ್ನು ಶೋಧಿಸಿದೆ.
ಈ ಮುನ್ನ ಗೋವಾ ಪೊಲೀಸರು, ತನಿಖೆಯ ಭಾಗವಾಗಿ ಹೋಟೆಲ್, ಗ್ರ್ಯಾಂಡ್ ಲಿಯೋನಿಯಲ್ಲಿನ ಕೊಠಡಿಗಳನ್ನು ಸೀಲ್ ಮಾಡಿದ್ದರು.
ಇದೀಗ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ ತಂಡವು ದಾಖಲೆಗಳನ್ನು ಸಂಗ್ರಹಿಸುತ್ತಿದ್ದು, ಮಾಜಿ ಟಿವಿ ಆಂಕರ್ ಅವರನ್ನು ಆಸ್ಪತ್ರೆಗೆ ಕರೆತಂದ ನಂತರ ಪರೀಕ್ಷಿಸಿದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾಹಿತಿ ಪಡೆಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನಾಲಿ ಫೋಗಟ್ ಸಾವಿನ ಹಿಂದೆ ಪಿತೂರಿ ಇದೆ ಎಂದು ಆಕೆಯ ಕುಟುಂಬ ಈ ಹಿಂದೆ ಹೇಳಿಕೊಂಡಿತ್ತು ಮತ್ತು ಸಿಬಿಐ ತನಿಖೆಯಿಂದ ಮಾತ್ರ ಸತ್ಯವನ್ನು ಹೊರ ತರಬೇಕಿದೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪತ್ರದಲ್ಲಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಸಿಬಿಐಗೆ ವಹಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!