ಸೋನಾಲಿ ಫೋಗಟ್ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಶಿಫಾರಸು ಮಾಡಿದೆ.

ಅಂದ್ಹಾಗೆ, ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸುವಂತೆ ಕೋರಿ ಕೇಂದ್ರ ಗೃಹ ಸಚಿವಾಲಯಕ್ಕೆ ಸರ್ಕಾರ ಪತ್ರ ಬರೆಯಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದರು. ಇದರ ಬೆನ್ನಲ್ಲೇ ಸಿಬಿಐ ತನಿಖೆ ನಡೆಸುವಂತೆ ಗೃಹ ಸಚಿವಾಲಯವು ಡಿಒಪಿಟಿ ಸಚಿವಾಲಯಕ್ಕೆ ಪತ್ರ ಬರೆದಿದೆ.

ಹರಿಯಾಣದ ಹಿಸಾರ್ನ ಬಿಜೆಪಿ ನಾಯಕಿ ಸೋನಾಲಿ ಫೋಗಟ್ (43) ಕಳೆದ ತಿಂಗಳು ಗೋವಾದಲ್ಲಿ ನಿಧನರಾಗಿದ್ದು, ಕೊಲೆಯಾದ ಶಂಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!