ಸೋನಾಲಿ ಪೋಗಟ್‌ ಸಾವಿನ ಪ್ರಕರಣ: ಐದನೇ ಆರೋಪಿಯಾಗಿ ಮತ್ತೊಬ್ಬ ಡ್ರಗ್‌ ಪೆಡ್ಲರ್‌ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:‌‌

ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಮತ್ತೊಬ್ಬ ಡ್ರಗ್‌ ಪೆಡ್ಲರ್‌ನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಐವರನ್ನು ಬಂಧಿಸಲಾಗಿದೆ.

ಬಂಧಿತ ಡ್ರಗ್ ದಂಧೆಕೋರನನ್ನು ಉತ್ತರ ಗೋವಾದ ಅಂಜುನಾ ನಿವಾಸಿ ರಾಮ ಮಾಂಡ್ರೇಕರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಬಂಧಿತನಾಗಿದ್ದ ಮತ್ತೊಬ್ಬ ಪೆಡ್ಲರ್ ದತ್ತಪ್ರಸಾದ್ ಗಾಂವ್ಕರ್‌ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಈತನನ್ನು ಬಂಧಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಮೃತ ಸೋನಾಲಿ ಪೋಗಟ್‌ ಅವರಿಗೆ ಪಾನೀಯದಲ್ಲಿ ಡ್ರಗ್ಸ್‌ ನೀಡಲಾಗಿದೆ ಎಂದು ಈ ಹಿಂದೆ ವರದಿಯಾಗಿದ್ದವು. ಆರೋಪಿಯು ಸೋನಾಲಿ ಫೋಗಟ್ ಅವರ ಪಾನೀಯದಲ್ಲಿ ಎಂಡಿಎಂಎ ಡ್ರಗ್ಸ್‌ ಅನ್ನು ಬೆರೆಸಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬಿಗ್‌ ಬಾಸ್‌, ಟಿಕ್‌ ಟಾಕ್‌ ಗಳಲ್ಲಿ ಖ್ಯಾತಿ ಗಳಿಸಿರುವ ಪೋಗಟ್‌ ಆ.23ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಪ್ರಾಥಮಿಕ ತಪಾಸಣೆಯಲ್ಲಿ ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿತ್ತು. ನಂತರ ಆಕೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಯಿತು. ಈ ವೇಳೆ ಆಕೆಗೆ ಮಾದಕ ದ್ರವ್ಯ ನೀಡಿರುವುದು ಬೆಳಕಿಗೆ ಬಂದಿದೆ. ಅವರ ದೇಹದ ಮೇಲೆ ಅನೇಕ ಗಾಯಗಳಿವೆ ಎಂಬ ವಿಷಯ ಬಹಿರಂಗವಾಗಿತ್ತು.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!