ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ, ರಾಹುಲ್‌ ಗೆ ಸಮನ್ಸ್‌ ನೀಡಿದ ಈಡಿ

ಹೊಸದಿಗಂತ ಡಜಿಟಲ್‌ ಡೆಸ್ಕ್:‌
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯವು ಸಮನ್ಸ್‌ ನೀಡಿದೆ.

ಕಾಂಗ್ರೆಸ್‌ ಪಕ್ಷದ ಒಡೆತನದಲ್ಲಿರುವ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ನಿರ್ವಹಣೆಗೆ ಸಂಬಂಧಿಸಿದಂತೆ ಅಕ್ರಮ ಹಣವರ್ಗಾವಣೆಯಾಗಿದೆ ಎಂದು ಬಿಜೆಪಿಯ ಸುಬ್ರಮಣಿಯನ್ ಸ್ವಾಮಿ ದೂರು ನೀಡಿದ್ದರು. ನ್ಯಾಷನಲ್‌ ಹೆರಾಲ್ಡ್‌ ಸ್ವಾಧೀನಪಡಿಸಿಕೊಳ್ಳುವಲ್ಲಿ ಗಾಂಧಿಯವರು ಹಣದ ದುರುಪಯೋಗ ಮಾಡಿದ್ದಾರೆ, ಗಾಂಧಿ ಕುಟುಂಬವು 86% ಪಾಲು ಹೊಂದಿರುವ ಯಂಗ್‌ ಇಂಡಿಯಾದ ಮೂಲಕ ಪತ್ರಿಕೆಯೆ ಹಿಂದಿನ ಪ್ರಕಾಶಕರುಗಳನ್ನು ಖರೀದಿಸಿ ಗಾಂಧಿ ಕುಟುಂಬದವರು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ವಶಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಪ್ರಸ್ತುತ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಈಡಿ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಸಮನ್ಸ್‌ ನೀಡಿದ್ದು ವಿದೇಶದಲ್ಲಿರುವ ರಾಹುಲ್‌ ಗಾಂಧಿಯವರು ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!