ಹೊಸ ದಿಗಂತ ಡಿಜಿಟಲ್ ಡೆಸ್ಕ್:
1924ರಲ್ಲಿ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ ಬೆಳಗಾವಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಗೈರಾಗಿದ್ದು, ಈ ಸಂಬಂಧ ಪತ್ರ ಬರೆದಿರುವ ಅವರು ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ.
ಸೋನಿಯಾ ಗಾಂಧಿ ಪತ್ರದಲ್ಲೇನಿದೆ?
ಐತಿಹಾಸಿಕ ಕಾರ್ಯಕ್ರಮದಲ್ಲಿ ನಿಮ್ಮೊಂದಿಗಿರಲು ಸಾಧ್ಯವಾಗುತ್ತಿಲ್ಲ. ಕಾರ್ಯಕ್ರಮಕ್ಕೆ ಗೈರಾಗಿರುವ ಕಾರಣಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. 39ನೇ ಅಧಿವೇಶನ ನಡೆದ ಸ್ಥಳದಲ್ಲೇ ನೀವೆಲ್ಲಾ ಸಮಾವೇಶಗೊಂಡಿರುವುದು ಸೂಕ್ತವಾಗಿದೆ. ಗಾಂಧೀಜಿ ಇದೇ ಸ್ಥಳದಲ್ಲಿ ಅಧ್ಯಕ್ಷರಾಗಿರುವುದಕ್ಕೆ ನಮ್ಮ ಪಕ್ಷಕ್ಕೆ ಹಾಗೂ ಸ್ವಾತಂತ್ರ್ಯ ಚಳವಳಿಗೆ ಮಹತ್ವದ ತಿರುವು ನೀಡಿದೆ. ದೆಹಲಿಯಲ್ಲಿ ಅಧಿಕಾರದಲ್ಲಿ ಇರುವವರಿಂದ ಗಾಂಧೀಜಿ ತತ್ವ ಸಿದ್ಧಾಂತಗಳಿಗೆ ಬೆದರಿಕೆ ಇದೆ. ಅಧಿಕಾರದಲ್ಲಿರುವ ಸಂಘಟನೆಗಳು ಎಂದೂ ಸ್ವಾತಂತ್ರ್ಯಕ್ಕಾಗಿ ಎಂದೂ ಹೋರಾಟ ಮಾಡಲಿಲ್ಲ.. ಅಲ್ಲದೇ ಮಹಾತ್ಮ ಗಾಂಧೀಜಿ ಅವರನ್ನ ಕಟುವಾಗಿ ವಿರೋಧಿಸಿದವರು, ಗಾಂಧೀಜಿ ಹತ್ಯೆ ಮಾಡಿದವರನ್ನ ಸಂಭ್ರಮಿಸಿದವರು.
ದೇಶದ ವಿವಿಧೆಡೆ ಗಾಂಧಿ ಸಂಘ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದು, ಇಂದು ನಡೆಯುತ್ತಿರುವ ಸಭೆಯನ್ನು ನವ ಸತ್ಯಾಗ್ರಹ ಬೈಠಕ್ ಎಂದು ಕರೆದಿರುವುದು ಸೂಕ್ತವಾಗಿದೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಕರೆ ನೀಡಿದ್ದಾರೆ. ಅಂತಹ ಶಕ್ತಿಗಳ ವಿರುದ್ಧ ರಾಜಿಯಾಗದೇ ಹೋರಾಟ ನಡೆಸುವ ನಿರ್ಣಯ ಮಾಡುವುದು ಸಂಕಲ್ಪ ಮತ್ತು ಕರ್ತವ್ಯ. ಸಾಮೂಹಿಕವಾಗಿ ಪಕ್ಷ ಸಂಘಟನೆ ಮಾಡೋಣ ಎಂದು ಪತ್ರದ ಮೂಲಕ ಕರೆ ಕೊಟ್ಟಿದ್ದಾರೆ.