ರಾಜಕೀಯ ಲಾಭಕ್ಕಾಗಿ ದ್ವೇಷ ಸೃಷ್ಟಿಸುವ ಬಿಜೆಪಿ: ಸೋನಿಯಾ ಗಾಂಧಿ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತಾರೂಢ ಬಿಜೆಪಿ ಭಾರತದಲ್ಲಿ ಭಯಭೀತ ವಾತಾವರಣ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಕಾಂಗ್ರೆಸ್ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ, ಸೋನಿಯಾ ಗಾಂಧಿ , ಉಜ್ವಲ ಭವಿಷ್ಯಕ್ಕಾಗಿ ಕಾಂಗ್ರೆಸ್ ಪಕ್ಷಕ್ಕಾಗಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಇಂದು ದೇಶದ ಪ್ರತಿಯೊಂದು ಮೂಲೆಯಲ್ಲೂ ಯುವಕರು ನಿರುದ್ಯೋಗವನ್ನು ಎದುರಿಸುತ್ತಿದ್ದಾರೆ. ಮಹಿಳೆಯರು ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ದಲಿತರು, ಬುಡಕಟ್ಟುಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಭಯಾನಕ ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದರು.

ಭಯದ ವಾತಾವರಣ ಸೃಷ್ಟಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಉದ್ದೇಶ . ಅವರೆಲ್ಲರೂ ಸೇರಿಕೊಂಡು ರಾಜಕೀಯ ಲಾಭಕ್ಕಾಗಿ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಪಕ್ಷವು ಯಾವಾಗಲೂ ಎಲ್ಲರ ಪ್ರಗತಿಗಾಗಿ, ವಂಚಿತರಿಗೆ ನ್ಯಾಯಕ್ಕಾಗಿ ಮತ್ತು ದೇಶವನ್ನು ಬಲಪಡಿಸಲು ಹೋರಾಡಿದೆ ಎಂದು ಪ್ರತಿಪಾದಿಸಿದರು.

ಬಡವರನ್ನು ಮೇಲೆತ್ತಲು, ಯುವಕರು ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸಲು, ರೈತರು ಮತ್ತು ಕಾರ್ಮಿಕರನ್ನು ಬೆಂಬಲಿಸಲು ಕಾಂಗ್ರೆಸ್​ ಪ್ರಣಾಳಿಕೆ ‘ನ್ಯಾಯ್ ಪತ್ರ’ವನ್ನು ಮಾಡಿದ್ದೇವೆ. ಅದರಲ್ಲಿರುವ ಅಂಶಗಳನ್ನು ಗಮನಿಸಿ ಬೆಂಬಲ ನೀಡುವಂತೆ ಅವರು ಕೋರಿಕೊಂಡರು.

11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿರುವ ಸಮಯದಲ್ಲಿ ಅವರ ವೀಡಿಯೊ ಸಂದೇಶ ಪ್ರಕಟಗೊಂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!