ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರದಿಂದ ಬಳಲುತ್ತಿರುವ ಕಾರಣ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದೀಗ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದ್ದು, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.