Monday, August 8, 2022

Latest Posts

ಮೂರನೇ ದಿನದ ವಿಚಾರಣೆಗೆ ಇಡಿಯೆದುರು ಹಾಜರಾದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ(ಇಂದು) ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿದ್ದಾರೆ.

ಅವರು ತಮ್ಮ ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ದೆಹಲಿಯಲ್ಲಿರುವ ಫೆಡರಲ್ ಏಜೆನ್ಸಿಯ ಕಚೇರಿಯನ್ನು ತಲುಪಿದರು. ಇದುವರೆಗೆ ಸೋನಿಯಾ ಗಾಂಧಿ ಅವರನ್ನು ಇಲ್ಲಿಯವರೆಗೆ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, 65-70 ಪ್ರಶ್ನೆಗಳನ್ನು ಕೇಳಲಾಗಿದೆ,

75ರ ಹರೆಯದ ಗಾಂಧಿ ಅವರನ್ನು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದ್ದು, ಅಲ್ಲಿ ಅವರು 65-70 ಪ್ರಶ್ನೆಗಳನ್ನು ಎದುರಿಸಿದ್ದಾರೆ. ಇನ್ನೂ 30-40 ಪ್ರಶ್ನೆಗಳನ್ನು ಕೇಳುವುದು ಬಾಕಿಯುಳಿದಿದ್ದು ಇಂದು ವಿಚಾರಣೆಯು ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss