Wednesday, June 7, 2023

Latest Posts

ಮೇ 6 ರಂದು ಹುಬ್ಬಳ್ಳಿಯಲ್ಲಿ ಸೋನಿಯಾ ಗಾಂಧಿ ಭರ್ಜರಿ ಪ್ರಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಪ್ರವೇಶಿಸಲಿದ್ದಾರೆ. ಮೇ 6 ರಂದು ಹುಬ್ಬಳ್ಳಿಯಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಂಗ್ರೆಸ್‌ ಪರವಾಗಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ನಾಯಕರು ರಾಜ್ಯದಲ್ಲಿ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಸೋನಿಯಾ ಗಾಂಧಿಯವರು ಮೇ 6ರಂದು ರಾಜ್ಯಕ್ಕೆ ನೀಡುವ ಭೇಟಿ ಮಹತ್ವದ್ದಾಗಿದೆ. ಅಂದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಹುಬ್ಬಳ್ಳಿಯಿಂದ ಲಿಂಗಾಯತ ಮುಖಂಡ, ಬಿಜೆಪಿಯ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿರುವುದರಿಂದ, ಅದೇ ಸ್ಥಳವನ್ನು ಆಯ್ಕೆ ಮಾಡಿರುವುದು ಮಹತ್ವದ್ದಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!