Monday, July 4, 2022

Latest Posts

ಇಡಿ ಹೊಸ ಸಮನ್ಸ್‌: ಅನಾರೋಗ್ಯದ ನೆಪವೊಡ್ಡಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಾರಿ ನಿರ್ದೇಶನಾಲಯ ಹೊಸ ಸಮನ್ಸ್‌ ನೀಡಿದ ಬೆನ್ನಲ್ಲೇ ಮತ್ತೊಮ್ಮೆ ಅನಾರೋಗ್ಯದ ನೆಪವೊಡ್ಡಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೂನ್‌ 8ರಂದು ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಕೊರೊನಾ ಕಾರಣ ನೀಡಿದ್ದ ಸೋನಿಯಾ ಗಾಂಧಿ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು. ಹಾಗಾಗಿ ಈ ತಿಂಗಳ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೋನಿಯಾಗೆ ಮತ್ತೆ ಸಮನ್ಸ್ ಕಳುಹಿಸಿತ್ತು.

ಇದೀಗ ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿತಿ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ʻಕೊರೊನಾ ನಂತರದ ತೊಂದರೆಗಳಿಂದ ಸೋನಿಯಾ ಗಾಂಧಿ ಬಳಲುತ್ತಿದ್ದು, ಅವರನ್ನು ಭಾನುವಾರ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ವೈದ್ಯಕೀಯ ಮೇಲ್ವಿಚಾರಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು’. ಸೋನಿಯಾ ಗಾಂಧಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹರಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಹಿತೈಷಿಗಳಿಗೆ ಕೃತಜ್ಞತೆ ಎಂದಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇದೇ ತಿಂಗಳ 2ರಂದು ರಾಹುಲ್ ಗಾಂಧಿ ಇಡಿ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿದೇಶದಲ್ಲಿರುವ ಕಾರಣ ನೀಡಿ ರಾಹುಲ್‌ ಗಾಂಧಿ ಕೂಡ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಇದೇ ತಿಂಗಳ 13ರಂದು ಪುನಃ ವಿಚಾರಣೆಗೆ ಬರುವಂತೆ ಹೊಸ ಸಮನ್ಸ್ ಕಳುಹಿಸಲಾಗಿದೆ. ನಾಳೆ ಇಡಿ ಮುಂದೆ ರಾಹುಲ್‌ ಗಾಂಧಿ ಹಾಜರಾಗುವ ನಿರೀಕ್ಷೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss