ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋವಿಡ್ ಅಸ್ವಸ್ಥತೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಶ್ವಾಸಕೋಶದ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕೋವಿಡ್‌ನಿಂದ ಅವರ ಶ್ವಾಸಕೋಶದ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಶಿಲೀಂಧ್ರ ಸೋಂಕು ಪತ್ತೆಯಾಗಿದ್ದು ಅದಕ್ಕೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಜೂನ್ 1 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಜೂ. 12ರಂದು ಕೋವಿಡ್ ತೊಡಕುಗಳು ಮತ್ತು ವಿಪರೀತ ಮೂಗಿನ ರಕ್ತಸ್ರಾವದಿಂದ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರದಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಇಡಿ ಸಮನ್ಸ್ ನೀಡಿದ ಬೆನ್ನಲ್ಲೇ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಅದರ ನಂತರ ಅವರಿಗೆ ಪೋಸ್ಟ್ ಕೊರೋನಾ (ಕೊರೋನಾ ನಂತರದ) ರೋಗಗಳು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ಜೂ.23ರಂದು ವಿಚಾರಣೆಗೆ ಹಾಜರಾಗುವಂತೆ ಹೊಸ ಸಮನ್ಸ್ ನೀಡಿದೆ.
ಪ್ರಸ್ತುತ ಅವರ ಪುತ್ರ ರಾಹುಲ್ ಗಾಂಧಿ ವಿಚಾರಣೆಯನ್ನು ಇಡಿ ನಡೆಸುತ್ತಿದೆ.