ರಾಜೀವ್ ಗಾಂಧಿ ಪುಣ್ಯಸ್ಮರಣೆ: ಸೋನಿಯಾ ಗಾಂಧಿ, ಪ್ರಿಯಾಂಕಾ, ಖರ್ಗೆಯವರಿಂದ ಪುಷ್ಪನಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 32 ನೇ ಪುಣ್ಯಸ್ಮರಣೆಯಾಗಿದ್ದು, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ರಾಷ್ಟ್ರ ರಾಜಧಾನಿಯ ವೀರ ಭೂಮಿಯಲ್ಲಿರುವ ರಾಜೀವ್‌ ಗಾಂಧಿ ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದರು.

1984 ರಲ್ಲಿ ತಮ್ಮ ತಾಯಿ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡರು. ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

1944 ರ ಆಗಸ್ಟ್ 20 ರಂದು ಜನಿಸಿದ ರಾಜೀವ್ ಗಾಂಧಿ, ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಆತ್ಮಾಹುತಿ ಬಾಂಬ್ ದಾಳಿಯಿಂದ ಹತ್ಯೆಗೀಡಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!