ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಅತ್ಯಾಚಾರ ಆರೋಪ: ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 ಮತ್ತು 506 ರ ಅಡಿಯಲ್ಲಿ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿಕೆ ನೀಡಿದ್ದಾರೆ.
ಜೂನ್ 25 ರಂದು ಮಾಧವನ್ ವಿರುದ್ಧ ದೂರು ಸ್ವೀಕರಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ವರದಿಗಳ ಪ್ರಕಾರ, 71 ವರ್ಷದ ಆರೋಪಿ ಪಿಪಿ ಮಾಧವನ್ (71) ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಹಿಳೆಯ ದೂರಿನ ಮೇರೆಗೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್ ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಆರೋಪದ ಕೇಸ್ ದಾಖಲಿಸಿದ್ದಾರೆ.
71 ವರ್ಷದ ಪಿಪಿ ಮಾಧವನ್, ಮದುವೆಯ ನೆಪದಲ್ಲಿ ನನ್ನ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಶೋಷಣೆಯನ್ನು ಮಾಡಿದ್ದಾನೆ ಎಂದು ಮಹಿಳೆ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾಳೆ.ಆಕೆಯ ಹೇಳಿಕೆಯ ಪ್ರಕಾರ, ಪಿಪಿ ಮಾಧವನ್ ಮಹಿಳೆಗೆ ತನ್ನ ಪ್ರೀತಿಯನ್ನು ಹೇಳಿಕೊಂಡಿದ್ದಾನೆ ಮತ್ತು ಅವಳನ್ನು ಮದುವೆಯಾಗುವ ಬಯಕೆಯನ್ನು ವ್ಯಕ್ತಪಡಿಸಿದ್ದಾನೆ ಎಂದು ಆರೋಪಿಸಲಾಗಿದೆ. ನನ್ನ ಒಪ್ಪಿಗೆ ಇಲ್ಲದೇ ಆತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆದರೆ ನಮ್ಮ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳು ಪಿತೂರಿ ಮತ್ತು ಆಧಾರರಹಿತ ಎಂದು ಮಾಧವನ್ ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!