ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ನೇಮಕ ಮಾಡಲಾಗಿದೆ.
ದೆಹಲಿಯ ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೆಸರನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪ್ರಸ್ತಾಪಿಸಿದರು. ಖರ್ಗೆ ಅವರ ಪ್ರಸ್ತಾಪಕ್ಕೆ ಗೌರವ್ ಗೋಗಯ್, ತಾರಿಕ್ ಅನ್ವರ್ ಹಾಗೂ ಕೆ.ಸುಧಾಕರ್ ಅನುಮೋದನೆ ನೀಡಿದರು. ಎಲ್ಲಾ ಸದಸ್ಯರು ಒಕ್ಕೊರಲ ಒಪ್ಪಿಗೆಯನ್ನು ಸೂಚಿಸಿದರು.
ಹೀಗಾಗಿ ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.