ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ನಿಯಮಿತ ವೈದ್ಯಕೀಯ ತಪಾಸಣೆಯ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ತಮ್ಮ ನಿವಾಸಕ್ಕೆ ಮರಳಿದ್ದಾರೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
ಮಂಗಳವಾರ ತಡರಾತ್ರಿ ಹೊಟ್ಟೆ ನೋವು ಮತ್ತು ಮೂತ್ರದ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರನ್ನು ಗುರುಗ್ರಾಮದ ಮೆದಾಂತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ದೃಢಪಡಿಸಿವೆ.
ಕಳೆದ ಕೆಲವು ವರ್ಷಗಳಿಂದ ಸೋನಿಯಾ ಗಾಂಧಿ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಜೂನ್ 2025 ಗ್ಯಾಸ್ಟ್ರೋಎಂಟರಾಲಜಿ ಸಮಸ್ಯೆಯಿಂದಾಗಿ ಚಿಕಿತ್ಸೆ ಪಡೆದಿದ್ದರು. ಮಾರ್ಚ್ 2026 ಜ್ವರ ಮತ್ತು ಸೋಂಕಿನ ಕಾರಣದಿಂದ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದರು.
ಸದ್ಯ ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿರುವ ಸೋನಿಯಾ ಗಾಂಧಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



