ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿರುವ ವಾಯುಮಾಲಿನ್ಯದಿಂದ ದೂರವಿರಲು ಸೋನಿಯಾ ಗಾಂಧಿ ಕೆಲವು ದಿನಗಳ ಕಾಲ ಜೈಪುರದಲ್ಲಿ ನೆಲೆಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂವಹನ ಜೈರಾಮ್ ರಮೇಶ್ ಹೇಳಿದ್ದಾರೆ.
ಮಂಗಳವಾರ ಸಂಜೆ 4 ಗಂಟೆಗೆ ಬಿಡುಗಡೆಯಾದ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೆಹಲಿಯ ಸರಾಸರಿ ಗಾಳಿಯ ಗುಣಮಟ್ಟವು “ತುಂಬಾ ಕಳಪೆ” ಆಗಿದ್ದು, ಎಕ್ಯೂಐ 397 ಮತ್ತು ಜೈಪುರದ ಎಕ್ಯೂಐ 264 (ಕಳಪೆ) ಆಗಿದೆ.