ಕರ್ನಾಟಕದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕರ್ನಾಟಕದಿಂದ ರಾಜ್ಯಭೆಗೆ ಸ್ಪರ್ಧಿಸ್ತಾರಾ? ಹೀಗೊಂದು ಚರ್ಚೆ ಆರಂಭವಾಗಿದೆ.

ಸೋನಿಯಾ ಗಾಂಧಿ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆ ಇರುವ ಕಾರಣ ಅವರನ್ನು ಕರ್ನಾಟಕ ಅಥವಾ ಹಿಮಾಚಲ ಪ್ರದೇಶದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ.

ಹಿಮಾಚಲಪ್ರದೇಶದಿಂದ ರಾಜ್ಯಸಭೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಯ್ಕೆ ಆಗಿದ್ದಾರೆ. ಏಪ್ರಿಲ್‌ನಲ್ಲಿ ಅವರ ಅವಧಿ ಕೊನೆಯಾಗಲಿದೆ. ಹಿಮಾಚಲದಲ್ಲಿ ಬಲಾಬಲದ ಆಧಾರದ ಮೇಲೆ ಕೈ ಗೆಲುವು ಸಾಧ್ಯತೆ ಇರುವ ಕಾರಣ ನಡ್ಡಾ ಬೇರೆ ರಾಜ್ಯದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!