Sunday, October 2, 2022

Latest Posts

ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶ ಪ್ರವಾಸ; ಜೊತೆಯಲ್ಲಿ ತೆರಳಲಿದ್ದಾರೆ ರಾಹುಲ್, ಪ್ರಿಯಾಂಕಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯಲು ವಿದೇಶ ಪ್ರವಾಸ ಮಾಡಲಿದ್ದಾರೆ ಮತ್ತು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ತರಳಲಿದ್ದಾರೆ ಎಂದು ಪಕ್ಷವು ತಿಳಿಸಿದೆ.
“ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಸೋನಿಯಾ ನವದೆಹಲಿಗೆ ಹಿಂದಿರುಗುವ ಮೊದಲು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿ ಮಾಡಲಿದ್ದಾರೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅವರು ಯಾವ ದೇಶಕ್ಕೆ ತೆರಳಿದ್ದಾರೆ ಎಂಬ ಬಗ್ಗೆ ಪಕ್ಷವು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ, ಅಲ್ಲಿಂದ ವಾಪಾಸ್ಸಾದ ಬಳಿಕ ರಾಹುಲ್ ಗಾಂಧಿ ಸೆಪ್ಟೆಂಬರ್ 4 ರಂದು ನವದೆಹಲಿಯಲ್ಲಿ ಕಾಂಗ್ರೆಸ್‌ನ ‘ಮೆಹಂಗೈ ಪರ್ ಹಲ್ಲಾ ಬೋಲ್’ ರ್ಯಾಲಿಯನ್ನು ಉದ್ದೇಶಿಸಿ  ಮಾತನಾಡಲಿದ್ದಾರೆ ಎಂದು ರಮೇಶ್ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ತನ್ನ ಅಧ್ಯಕ್ಷೀಯ ಚುನಾವಣೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಸಿದ್ಧವಾಗಿದೆ. ಅದರ ವೇಳಾಪಟ್ಟಿ ಈ ವಾರ ಹೊರಬೀಳುವ ನಿರೀಕ್ಷೆಯಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ಕಾಂಗ್ರೆಸ್ ಪಕ್ಷವು ರಾಹುಲ್ ಗಾಂಧಿ “ಅವಿರೋಧವಾಗಿ” ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವುದರ ಪರವಾಗಿದೆ ಎಂದು ಹೇಳಿದ್ದರು.
“ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗದಿದ್ದರೆ ದೇಶದ ಕಾಂಗ್ರೆಸ್ಸಿಗರಿಗೆ ನಿರಾಸೆ ಕಾಡಲಿದೆ. ಮನೆಯಲ್ಲಿ ಕುಳಿತು ಅನೇಕರು ನರಳುತ್ತಾರೆ, ಸಾಮಾನ್ಯ ಕಾಂಗ್ರೆಸ್ ಜನರ ಭಾವನೆಗಳನ್ನು ಅರ್ಥಮಾಡಿಕೊಂಡು ಅವರೇ ಈ ಹುದ್ದೆಯನ್ನು ಸ್ವೀಕರಿಸಬೇಕು. ಎಂದು ಗೆಹ್ಲೋಟ್ ಒತ್ತಾಯಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!