ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕವನ್ನು ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ವಿಶ್ವಾಸ ಇದೆ, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಿರಿ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಸಿಎಂ ಡಿ.ಕೆ. ಶಿವಕುಮಾರ್‌ಗೆ ದೂರವಾಣಿ ಮೂಲಕ ಶುಭ ಹಾರೈಸಿದ್ದಾರೆ.
ಈ ರಾಜ್ಯದ ಚುಕ್ಕಾಣಿ ಹಿಡಿದಿದ್ದೀರಿ. ಹೊಸ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ ಎಂದು ಹೇಳಿದ್ದಾರೆ. ಈಗಷ್ಟೇ ಲೋಕಭವನದ ಗಾಜಿನ ಮನೆಯಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಡಿ. ಕೆ. ಶಿವಕುಮಾರ್ ಭಗವಂತ ಹಾಗೂ ಸಾರ್ವಜನಿಕರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ದೀರ್ಘಾವಧಿಯ ಚರ್ಚೆಗಳ ನಂತರ, ಹಿರಿಯ ನಾಯಕ ಡಾ. ಜಿ. ಪರಮೇಶ್ವರ್‌ನ್ನು ಏಕೈಕ ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಮೊದಲ ಹಂತದಲ್ಲಿ ಮುಖ್ಯಮಂತ್ರಿಗಳೊಂದಿಗೆ ಯು. ಟಿ. ಖಾದರ್, ಎಂ. ಬಿ. ಪಾಟೀಲ್, ಕೆ. ಜೆ. ಜಾರ್ಜ್ ಮತ್ತು ಕೃಷ್ಣ ಬೈರೇಗೌಡ ಸೇರಿದಂತೆ ಒಟ್ಟು 13 ನಾಯಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.



