January18, 2026
Sunday, January 18, 2026
spot_img

ಭಾರತೀಯ ಪ್ರಜೆಯಾಗುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಸೋನಿಯಾ ಗಾಂಧಿ ಹೆಸರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ನಾಗರಿಕರಾಗುವ 3 ವರ್ಷಗಳ ಮೊದಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ ಎಂದು ಆರೋಪಿಸಿ ದೆಹಲಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.

ವಿಕಾಸ್ ತ್ರಿಪಾಠಿ ಎಂಬುವವರು ಸಲ್ಲಿಸಿದ ಅರ್ಜಿಯಲ್ಲಿ ಸೋನಿಯಾ ಗಾಂಧಿಯವರು ಏಪ್ರಿಲ್ 1983ರಲ್ಲಿ ಭಾರತದ ನಾಗರಿಕರಾಗಿದ್ದರೂ, 1980ರಲ್ಲಿಯೇ ದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ವೈಭವ್ ಚೌರಾಸಿಯಾ ಅವರು ಇಂದು ಪ್ರಕರಣದ ವಿಚಾರಣೆ ನಡೆಸಿ, ಸೆಪ್ಟೆಂಬರ್ 10ರಂದು ಈ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

1980ರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ. 1982ರಲ್ಲಿ ಡಿಲೀಟ್ ಮಾಡಲಾಗಿದೆ ಮತ್ತು ನಂತರ 1983ರಲ್ಲಿ ಮತ್ತೆ ಸೇರಿಸಲಾಗಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ.

1980ರಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದರೆ ಕೆಲವು ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದರ್ಥ. ಆದ್ದರಿಂದ, ಎಫ್‌ಐಆರ್ ದಾಖಲಿಸಲು ಆದೇಶಗಳನ್ನು ಹೊರಡಿಸುವಂತೆ ಅವರು ನ್ಯಾಯಾಲಯವನ್ನು ಕೋರಿದರು. ತ್ರಿಪಾಠಿ ಅವರ ವಕೀಲರು ವಾದಗಳನ್ನು ಪೂರ್ಣಗೊಳಿಸಿದ ನಂತರ, ಮುಂದಿನ ವಾರ ವಿಚಾರಣೆ ಮತ್ತೆ ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

Must Read

error: Content is protected !!