ಸೋನಿಯಾ ಗಾಂಧಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಆರೋಗ್ಯ ಸ್ಥಿತಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ. ಅಜಯ್ ಸ್ವರೂಪ್ ಈ ಕುರಿತು ಮಾಹಿತಿ ನೀಡಿದ್ದು, ‘ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜನವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಸ್ಥಿರ ಮತ್ತು ತೃಪ್ತಿಕರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ’ ಎಂದು ಹೇಳಿದರು.

ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರನ್ನು ಜನವರಿ 4 ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!