Monday, March 4, 2024

ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆಗೆ ಸೋನಿಯಾ, ಖರ್ಗೆ, ಅಧೀರ್ ರಂಜನ್ ಹೋಗಲ್ಲ: ಕಾಂಗ್ರೆಸ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ. 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ, (Sonia Gandhi) ಕಾಂಗ್ರೆಸ್​ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, (Mallikarjuna Kharge) ಅಧೀರ್ ರಂಜನ್ ಬರುವುದಿಲ್ಲ ಎಂದು ಕಾಂಗ್ರೆಸ್​​ ಹೇಳಿದೆ.

ಮೈತ್ರಿಕೂಟವು ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧಾರಿಸಿದೆ. ಈ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು ಸ್ಪಷ್ಟವಾಗಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕ್ರಮವಾಗಿ ಮಾರ್ಪಟ್ಟಿದೆ ಎಂದು ಕಾಂಗ್ರೆಸ್ ಹೇಳಿದೆ.

ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮ ಎಂಬುದು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್ ಮತ್ತು ಬಿಜೆಪಿಯವರು ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಆಗುತ್ತಿರುವ ಈ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ ಎಂಬುದು ಬಹಳ ಸ್ಪಷ್ಟವಾಗಿದೆ.2019ರ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿ ಮತ್ತು ಶ್ರೀರಾಮನನ್ನು ಗೌರವಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಆರೆಸ್ಸೆಸ್ ಮತ್ತು ಬಿಜೆಪಿಯವರು ಆಯೋಜಿಸಿರುವ ಕಾರ್ಯಕ್ರಮದ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!