ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ವಿಚಾರವಾಗಿ ಕಾನೂನು ಚೌಕಟ್ಟಿನೊಳಗೆ ತಮ್ಮ ಪತಿ ದರ್ಶನ್ ಬಿಡುಗಡೆಗೆ ಸಹಾಯ ಮಾಡುವ ಕುರಿತು ಚರ್ಚಿಸಲೆಂದು ವಿಜಯಲಕ್ಷ್ಮಿ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಎನ್ನಲಾಗಿತ್ತು.
ಅವರ ಮಗನ ಶಾಲೆಯ ಅಡ್ಮಿಷನ್ ವಿಚಾರವಾಗಿ ಮಾತನಾಡಲು ಬಂದಿದ್ದರೆ ಹೊರತು ಬೇರೇನೂ ಮಾತನಾಡಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ನಿನ್ನೆ ನಾನು ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಹೋಗಿದ್ದೆ, ಅಲ್ಲಿ ಭೇಟಿ ಮಾಡಲು ಬಂದಿದ್ದರು, ಅಲ್ಲಿ ಭೇಟಿ ಮಾಡೋಕೆ ಆಗಲಿಲ್ಲ, ನಾಳೆ ಮನಗೆ ಬನ್ನಿ ಅಂತ ಹೇಳಿದ್ದೆ. ಹಾಗಾಗಿ ಬಂದಿದ್ದರು.
ಅವರ ಮಗ ವಿನೀಶ್ ನಮ್ಮ ಶಾಲೆಯಲ್ಲಿ ಓದುತ್ತಿದ್ದ, ಆ ನಂತರ ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ನಾನು ಪ್ರಾಂಶುಪಾಲರಿಗೆ ಹೇಳುತ್ತೇನೆ ಎಂದು ಭರವಸೆ ಕೊಟ್ಟಿದ್ದೇನೆ, ದರ್ಶನ್ ಕೇಸು ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದುಕೊಂಡಿದ್ದೆ, ಆದರೆ ಅವರು ಮಾತನಾಡಿಲ್ಲ, ನಾನು ಕೂಡ ಆ ವಿಷಯ ಪ್ರಸ್ತಾಪಿಸಲಿಲ್ಲ ಎಂದರು.