ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಸುಂಟಿಕೊಪ್ಪ:
ಸುಂಟಿಕೊಪ್ಪ ಗ್ರಾ.ಪಂ ನೂತನ ಸದಸ್ಯರುಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದು, ಡಾ.ಅಂಬೇಡ್ಕರ್ ಕಾಲೋನಿ ಸೇರಿದಂತೆ ಇತರ ಬಡಾವಣೆಗಳಿಗೆ ಕಲುಷಿತ ನೀರು ಸರಬರಾಜಾಗುತ್ತಿದ್ದ ಕಾರಣ ಹೊಸ ಪೈಪ್ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಕಳೆದ ಹಲವು ವರ್ಷಗಳಿಂದ ಕಲುಷಿತ ನೀರು ಸರಬರಾಜಾಗುತ್ತಿದ್ದು, ಎಷ್ಟೇ ಮನವಿ ಪತ್ರಗಳನ್ನು ಸಲ್ಲಿಸಿದ್ದರೂ ಸ್ಪಂದನೆ ದೊರೆತಿರಲಿಲ್ಲ. ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಸದಸ್ಯರಾದ ಮಂಜುನಾಥ್, ಬಿ.ಎಂ.ಸುರೇಶ್ ಸಮಸ್ಯೆಯ ಗಂಭೀರತೆಯನ್ನು ಅರಿತು ವಿಶೇಷ ಆಸಕ್ತಿ ವಹಿಸಿ ಶುದ್ಧ ಕುಡಿಯುವ ನೀರು ಒದಗಿಸಲು ಮುಂದಾಗಿದ್ದಾರೆ.
ಪಂಚಾಯಿತಿ ಪಿಡಿಒ ವೇಣುಗೋಪಾಲ್ ಅವರ ಸಹಕಾರದೊಂದಿಗೆ 2 ಲಕ್ಷ ರೂ.ವಿಶೇಷ ಅನುದಾನದಲ್ಲಿ ಹೊಸ ಪೈಪ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ.
ಹಳೆಯ ಪೈಪ್ಗಳನ್ನು ತೆಗೆದು ಓವರ್ ಹೆಡ್ ಟ್ಯಾಂಕ್ ನಿಂದ ಹೊಸ ಪೈಪ್ ಲೈನ್ ಅಳವಡಿಸಿ ಪಂಪ್ಹೌಸ್ ರಸ್ತೆಯ ಮನೆಗಳಿಗೆ ಸೌಲಭ್ಯ ಒದಗಿಸಿಕೊಡಲಾಯಿತು. ಕಾಮಗಾರಿಯನ್ನು ಗುತ್ತಿಗೆದಾರ ಮನು ರೈ ನಿರ್ವಹಿಸಿದರು