ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿaತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ರಾಷ್ಟ್ರ ರಾಜಧಾನಿ ದೆಹಲಿ ಸರ್ಕಾರದ ಯೋಜನೆಗಳಿಗೆ ನಟ ಸೋನು ಸೂದ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಹೌದು… ಸೋನು ಸೂದ್ ಅವರು ದೆಹಲಿಯ ಆಮ್ ಆದ್ಮಿ ಸರ್ಕಾರದ ಮಹತ್ವಾಕಾಂಕ್ಷೆಯ ‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿರುವುದಾಗಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಘೋಷಿಸಿದ್ದಾರೆ.
ಈ ವಿಶೇಷ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದ ಆಯ್ಕೆಗಳನ್ನು ಮಾಡಲು ಮಾರ್ಗದರ್ಶನ ನೀಡಲಾಗುವುದು,
‘ದೇಶ್ ಕೆ ಮೆಂಟರ್ಸ್’ ಕಾರ್ಯಕ್ರಮವು ಭಾರತದ ಅತಿದೊಡ್ಡ ಮಾರ್ಗದರ್ಶನ ಕಾರ್ಯಕ್ರಮವಾಗಿದ್ದು, ಸುಮಾರು 3 ಲಕ್ಷ ಯುವ ವೃತ್ತಿಪರರು 10 ಲಕ್ಷ ದೆಹಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಮಾರ್ಗದರ್ಶನ ನೀಡಲಾಗುವುದು. ಈ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಲು ಸೋನು ಸೂದ್ ಒಪ್ಪಿಕೊಂಡಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ
“ಸರ್ಕಾರಿ ಶಾಲೆಗಳಲ್ಲಿ ಕೆಲವು ವಿದ್ಯಾರ್ಥಿಗಳು ತೀರಾ ಬಡತನದ ಹಿನ್ನೆಲೆಯಿಂದ ಬಂದವರಾಗಿರುತ್ತಾರೆ. ಅವರಿಗೆ ಮಾರ್ಗದರ್ಶನ ಮಾಡಲು ಕಡಿಮೆ ಜನರಿರುತ್ತಾರೆ ಈ ಮಕ್ಕಳಿಗೆ ಮಾರ್ಗದರ್ಶಕರಾಗಲು ವಿದ್ಯಾವಂತರಿಗೆ ಮನವಿ ಮಾಡಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.”