Thursday, March 23, 2023

Latest Posts

ಸೆಲ್ಫಿ ವಿಚಾರವಾಗಿ ಜಗಳ: ಮುಂಬೈನಲ್ಲಿ ಖ್ಯಾತ ಗಾಯಕ ಸೋನು ನಿಗಮ್‌ ಮತ್ತು ತಂಡದ ಮೇಲೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಸೋಮವಾರ ರಾತ್ರಿ ಮುಂಬೈ ನ ಚೆಂಬೂರ್ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸೆಲ್ಫಿ ತೆಗೆದುಕೊಳ್ಳುವ ವಿಚಾರವಾಗಿ ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾಗಿದೆ.

ಚೆಂಬೂರ್‌ನಲ್ಲಿ ಆಯೋಜಿಸಿದ್ದ ಸಂಗೀತೋತ್ಸವದಲ್ಲಿ ಸೋನು ನಿಗಮ್ ಪಾಲ್ಗೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಈ ಜಗಳ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಿವಸೇನಾ ನಾಯಕ ಉದ್ಧವ್ ಠಾಕ್ರೆ ಬಣದ ಶಾಸಕ ಪ್ರಕಾಶ್​ ಫರ್ತೆಪೇಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಘಟನೆ ಸಂಬಂಧ ಮುಂಬೈಯ ಚೆಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!