CINE | ಕಾನ್ಸರ್ಟ್‌ ವೇಳೆ ನೋವಿನಿಂದ ಒದ್ದಾಡಿ ಆಸ್ಪತ್ರೆ ಸೇರಿದ ಸೋನು ನಿಗಮ್‌, ಆಗಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾನ್ಸರ್ಟ್‌ ಒಂದರ ವೇಳೆ ಸೋನು ನಿಗಮ್‌ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ನೋವಿನಿಂದ ಒದ್ದಾಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೈವ್ ಪರ್ಫಾರ್ಮೆನ್ಸ್ ವೇಳೆ ಬೆನ್ನು ನೋವು ಹೆಚ್ಚಾಗಿದೆ. ಆದಾಗ್ಯೂ ಅದನ್ನು ತಡೆದಿಟ್ಟುಕೊಂಡು ಪರ್ಫಾರ್ಮೆನ್ಸ್ ಮುಂದುವರಿಸಿದ್ದಾರೆ. ಆ ಬಳಿಕ ಅವರು ಆಸ್ಪತ್ರೆ ಸೇರಿದ್ದಾರೆ. ಈ ಸಂದರ್ಭದ ವಿಡಿಯೋ ಹಂಚಿಕೊಂಡಿದ್ದಾರೆ.

ಸೋನು ನಿಗಮ್ ಅವರು ಸಾಕಷ್ಟು ಸೂಪರ್ ಹಿಟ್ ಗೀತೆಗಳನ್ನು ನೀಡಿದವರು. ತಮ್ಮದೇ ಬ್ಯಾಂಡ್ ಹೊಂದಿರೋ ಅವರು ಕಾನ್ಸರ್ಟ್​​ಗಳನ್ನು ನೀಡುತ್ತಾ ಇರುತ್ತಾರೆ. ಇತ್ತೀಚೆಗೆ ಪರ್ಫಾರ್ಮೆನ್ಸ್ ನೀಡುವಾಗ ಅವರಿಗೆ ಸಮಸ್ಯೆ ಆಗಿದೆ. ಆದರೆ, ಅದನ್ನು ಅದಮಿಟ್ಟುಕೊಂಡು ಹಾಡು ಹೇಳಿ ಜನರನ್ನು ರಂಜಿಸಿದ್ದಾರೆ. ಆ ಬಳಿಕ ಏನಾಯಿತು ಎಂಬುದನ್ನು ಅವರು ವಿಡಿಯೋ ಮೂಲಕ ವಿವರಿಸಿದ್ದಾರೆ.

ಸೋನು ನಿಗಮ್ ಅವರು ಆಸ್ಪತ್ರೆಯಲ್ಲಿ ಮಲಗಿದ್ದು, ಏನಾಯಿತು ಎಂಬುದನ್ನು ವಿವರಿಸಿದ್ದಾರೆ. ‘ನನ್ನ ಜೀವನದ ಅತ್ಯಂತ ಕಷ್ಟದ ದಿನ. ನಾನು ಹಾಡು ಹೇಳುತ್ತಾ, ವೇದಿಕೆ ಮೇಲೆಲ್ಲ ಓಡಾಡುತ್ತಾ ಇದ್ದೆ. ಆಗ ನೋವು ಕಾಣಿಸಿಕೊಂಡಿತು. ಆದರೆ, ಹೇಗೋ ಮ್ಯಾನೇಜ್ ಮಾಡಿದೆ. ಜನರು ನನ್ನಿಂದ ಎಷ್ಟನ್ನು ನಿರೀಕ್ಷಿಸುತ್ತಾರೋ ಅದಕ್ಕಿಂತ ಕಡಿಮೆ ಕೊಡಲು ನನಗೆ ಇಷ್ಟ ಇಲ್ಲ’ ಎಂದು ಅವರು ಹೇಳಿದ್ದಾರೆ.

‘ಅತಿಯಾದ ನೋವು ಕಾಣಿಸಿತ್ತು. ನನ್ನ ಬೆನ್ನು ಹುರಿಗೆ ಯಾರೋ ಇಂಜೆಕ್ಷನ್ ಸೂಜಿ ಇಟ್ಟಿದ್ದಾರೆ ಅನಿಸುತ್ತಿತ್ತು. ಸ್ವಲ್ಪ ಅಲ್ಲಾಡಿದರೂ ನೋವು ಕಿತ್ತು ಬರುತ್ತಿತ್ತು’ ಎಂದು ಅವರು ಹೇಳಿರೋ ಅವರು ವಿಡಿಯೋ ಕ್ಯಾಪ್ಶನ್​ನಲ್ಲಿ ‘ರಾತ್ರಿ ಸರಸ್ವತಿ ನನ್ನ ಕೈ ಹಿಡಿದರು’ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!