ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸಂಕಷ್ಟ ಕಾಲದಲ್ಲಿ ಜನರ ನೆರವಿಗೆ ನಿಂತಿರುವ ಬಾಲಿವುಡ್ ನಟ ಸೋನು ಸೂದ್, ಇದೀಗ ಚಿತ್ರದುರ್ಗದಲ್ಲಿನ ಕೊರೋನಾ ಸೋಂಕಿತರಿಗೆ ತಮ್ಮ ಸಹಾಯ ಹಸ್ತ ಚಾಚಿದ್ದಾರೆ.
ಚಿತ್ರದುರ್ಗದ ಬಸ್ಸಪ್ಪ ಆಸ್ಪತ್ರೆಯಲ್ಲಿರುವ ವಿನಯ್ ಎಂಬುವ ಸೋಂಕಿತರಿಗೆ ರೆಮಿಡಿಸಿವಿರ್ ಲಸಿಕೆ ಬೇಕಾಗಿದ್ದು, ಈ ಕುರಿತು ಹರ್ಭಜನ್ ಸಿಂಗ್ ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸೋನು ಸೂದ್ ಲಸಿಕೆ ತಲುಪಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕ್ರಿಕೆಟಿಗ ಹರ್ಭಜನ್ ಸಿಂಗ್, ಧನ್ಯವಾದ ಸಹೋದರ. ದೇವರು ನಿನಗೆ ಮತ್ತಷ್ಟು ಶಕ್ತಿ ನೀಡಲಿ ಎಂದು ತಿಳಿಸಿದ್ದಾರೆ.