ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ನದಿಗೆ 1ಲಕ್ಷ ಕ್ಯೂಸೆಕ್ ನೀರು..

ಹೊಸದಿಗಂತ ವರದಿ ಬೆಳಗಾವಿ: 

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣಾ ಹಾಗೂ ಅದರ ಉಪನದಿಗಳ ಒಳಹರಿವು ಹೆಚ್ಚಳವಾಗಿದೆ. ಆಲಮಟ್ಟಿ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಯಾವುದೇ ಕ್ಷಣದಲ್ಲಾದರೂ  ಬಿಡುಗಡೆಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಜಲಾಯನ ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಮಂಗಳವಾರ ಮುಂಜಾನೆ 1 ಲಕ್ಷ ಕ್ಯೂಸೆಕ್ಸ್ ಅಧಿಕ ನೀರಿನ ಒಳಹರಿವಿದ್ದು, ಸದ್ಯ 75 ಸಾವಿರ ಕ್ಯೂಸೆಕ್ ನೀರು ಜಲಾಶಯದಿಂದ ಹೊರಗಡೆ ಬಿಡಲಾಗಿದೆ. ಯಾವುದೇ ಕ್ಷಣದಲ್ಲಾದರೂ ನೀರಿನ ಹೊರ ಹರಿವು 1 ಲಕ್ಷ ಕ್ಯೂಸೆಕ್ಸ್ ಹೆಚ್ಚಾಗಬಹುದು ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಮಳೆ ಮುಂದುವರೆದಿದ್ದು, ಕೃಷ್ಣಾ ನದಿಯ ನೀರಿನ ಒಳ ಹರಿವು ಇನ್ನೂ ಹೆಚ್ಚಾಗುವ ಸಂಭವವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!