ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ: ಐಪಿಎಲ್ ಫ್ಯಾನ್ಸ್ ಗೆ ಬಿಗ್ ಶಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ದಿನಾಂಕ ಈಗಾಗಲೇ ಘೋಷಣೆ ಮಾಡಲಾಗಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು. ಇದರ ಜೊತೆಗೆ ನಾಲ್ಕು ರಾಜ್ಯಗಳಲ್ಲಿ ಸಾರ್ವತ್ರಿಕ ಚುನಾವಣೆಗಳು ಮತ್ತು ಉಪಚುನಾವಣೆಗಳನ್ನು ಘೋಷಿಸಲಾಗಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಚುನಾವಣೆ ನಡೆಯಲಿದ್ದು. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ನಡುವೆ 2024ರಲ್ಲಿ ಐಪಿಎಲ್ ಟೂರ್ನಿಯನ್ನು ದುಬೈಗೆ ಸ್ಥಳಾಂತರಿಸಲು ಬಿಸಿಸಿಐ ಮುಂದಾಗಿದ್ದು, ಬಿಸಿಸಿಐ ತಂಡ ಈಗಾಗಲೇ ದುಬೈನಲ್ಲಿ ಬೀಡು ಬಿಟ್ಟಿದ್ದು, ಐಪಿಎಲ್ ವೇಳಾಪಟ್ಟಿ ಕುರಿತು ಚರ್ಚೆ ನಡೆಸುತ್ತಿದೆ.

ಬಿಸಿಸಿಐ ತಂಡ ಸದ್ಯ ದುಬೈನಲ್ಲಿದೆ. ದುಬೈನಲ್ಲಿ ಐಪಿಎಲ್ ವಿಮರ್ಶೆ ನಡೆಯಲಿದೆ. IPLನ 10 ಫ್ರಾಂಚೈಸಿಗಳು ತಮ್ಮ ತಂಡದ ಆಟಗಾರರ ಪಾಸ್‌ಪೋರ್ಟ್ ವಿವರಗಳನ್ನು ನೀಡುವಂತೆ ಕೇಳಲಾಗಿದೆ. ಅಲ್ಲದೆ ಲೋಕಸಭೆ ಚುನಾವಣೆಯ ಕಾರಣ ಬಿಸಿಸಿಐ 2024ರ ಐಪಿಎಲ್ ಟೂರ್ನಿಯ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದೀಗ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬಿಸಿಸಿಐ ಚಟುವಟಿಕೆ ಚುರುಕುಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!