ಜಾಮೀನು ಸಿಕ್ಕ ಕೆಲಹೊತ್ತಲ್ಲೇ ಮತ್ತೆ ಶಾಸಕ ಜಿಗ್ನೇಶ್ ಮೇವಾನಿ ಅರೆಸ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಧಾನಿಮೋದಿ ಅವರ ವಿರುದ್ಧ ಟ್ವೀಟ್ ಮಾಡಿ ಬಂಧನಕ್ಕೊಳಗಾಗಿದ್ದ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿಗೆ ಇಂದು ಜಾಮೀನು ಸಿಕ್ಕಿದ್ದು, ಆದರೆ, ಇದರ ಬೆನ್ನಲ್ಲೇ ಅಸ್ಸಾಂ ಪೊಲೀಸರು ಮತ್ತೊಂದು ಹೊಸ ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದಾರೆ.
ಮೋದಿ ವಿರುದ್ಧ ಸರಣಿ ಟ್ವೀಟ್​ ಮಾಡಿರುವುದಕ್ಕೆ ಸಂಬಂಧಿಸಿದಂತೆ ಗುಜರಾತ್​ನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಅಸ್ಸಾಂನಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ, ಅವರನ್ನ ಕಳೆದ ಬುಧವಾರ ತಡರಾತ್ರಿ ಅಸ್ಸಾಂ ಸ್ಸೋಂ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರಿಗೆ ಜಾಮೀನು ಮಂಜೂರುಗೊಂಡಿತ್ತು.
ಇದರ ಬೆನ್ನಲ್ಲೇ ಬರ್ಪೆಟಾ ಜಿಲ್ಲೆಯಲ್ಲಿ ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದ್ದು, ಹೀಗಾಗಿ ಅವರನ್ನ ಬಂಧನ ಮಾಡಲಾಗಿದೆ.
ಕೆಲವು ದಿನಗಳ ಹಿಂದೆ ಹಂಚಿಕೊಂಡ ಮೇವಾನಿ ಟ್ವೀಟ್​ ಎರಡು ಸಮುದಾಯಗಳ ನಡುವೆ ದ್ವೇಷ ಬಿತ್ತಲು ಸಂಚು, ಸಮುದಾಯವನ್ನು ಅವಮಾನಿಸುವುದು, ಶಾಂತಿಯ ವಾತಾವರಣ ಕದಡುವಂತಿದೆ ಎಂದು ಆರೋಪಿಸಿದ್ದರು. ಹೀಗಾಗಿ ಅಸ್ಸಾಂ ಪೊಲೀಸರು ಜಿಗ್ನೇಶ್ ಮೇವಾನಿ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ಅವರನ್ನ ಪೊಲೀಸರು ಬಂಧನ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!