ಶೀಘ್ರದಲ್ಲೇ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ನೇರ ನೇಮಕಾತಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, 778 ಉಪನ್ಯಾಸಕರ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಈ ಸಂಬಂಧ ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕನ್ನಡ ವಿಷಯದಲ್ಲಿ 100 ಹುದ್ದೆ, ಇಂಗ್ಲೀಷ್ 120, ಇತಿಹಾಸ 120, ಅರ್ಥಶಾಸ್ತ್ರ 180, ಭೂಗೋಳಶಾಸ್ತ್ರ 20, ವಾಣಿಜ್ಯ ಶಾಸ್ತ್ರ 80, ಸಮಾಜಶಾಸ್ತ್ರ 75, ರಾಜ್ಯಶಾಸ್ತ್ರ 75, ಮನಶಾಸ್ತ್ರ 02, ಗಣಕ ವಿಜ್ಞಾನ 6 ಹುದ್ದೆ ಸೇರಿ ಒಟ್ಟು 778 ವಿವಿಧ ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!