Wednesday, November 30, 2022

Latest Posts

ಶೀಘ್ರದಲ್ಲೇ ಕೆಂಪೇಗೌಡರ ಪ್ರತಿಮೆ ಸಾರ್ವಜನಿಕ ವೀಕ್ಷಣೆಗೆ ಲಭ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಇರುವ ಬೃಹತ್ ಕೆಂಪೇಗೌಡರ ಪ್ರತಿಮೆಯನ್ನು ವೀಕ್ಷಿಸಲು ಹೆಚ್ಚಿನ ಜನ ಆಸಕ್ತಿ ತೋರುತ್ತಿದ್ದಾರೆ.

ಪ್ರತಿಮೆ ವೀಕ್ಷಿಸಲು ಆಸಕ್ತಿ ಇರುವವರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕೆಂಪೇಗೌಡ ಪರಂಪರೆ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್ ಅಶ್ಚತ್ಥ ನಾರಾಯಣ್ ಹೇಳಿದ್ದಾರೆ.

ಪ್ರವಾಸಿಗರಿಗೆ ಪ್ರವೇಶವಿಲ್ಲ ಎಂಬ ಸುದ್ದಿ ಹಿನ್ನೆಲೆ ಅಶ್ವತ್ಥನಾರಾಯಣ ಅವರು ಪ್ರತಿಮೆಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಥೀಮ್ ಪಾರ್ಕ್‌ಗೆ ಸಂಬಂಧಿಸಿದ ಕೆಲಸಗಳು ಇನ್ನೂ ನಡೆಯುತ್ತಿವೆ. ಹಾಗಾಗಿ ಐಒಸಿ ಇಂಧನ ನಿಲ್ದಾಣದ ಕಡೆಯಿಂದ ಪ್ರತಿಮೆ ತಲುಪಲು ಅನುಕೂಲ ಮಾಡಿಕೊಡಲಾಗಿದೆ. ಗರಿಷ್ಠ 80 ವಾಹನಗಳ ಪಾರ್ಕಿಂಗ್ ಸೌಲಭ್ಯ ಇನ್ನೇನು ಒಂದು ತಿಂಗಳಲ್ಲಿ ಆಗಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!