ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೀಘ್ರದಲ್ಲೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಸರ್ಕಾರದ ವಕ್ತಾರರು ಮಂಗಳವಾರ(ನವೆಂಬರ್ 19) ತಿಳಿಸಿದ್ದಾರೆ.
ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತ ಭೇಟಿಯ ನಿರ್ದಿಷ್ಟ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಮತ್ತು ರಷ್ಯಾ ಅದಕ್ಕೆ ತಯಾರಿಯನ್ನು ಪ್ರಾರಂಭಿಸುತ್ತದೆ ಎಂದು ಕ್ರೆಮ್ಲಿನ್ ಪತ್ರಿಕಾ ಕಾರ್ಯದರ್ಶಿ ಡಿಮಿಟ್ರಿ ಪೆಸ್ಕೋವ್ ಅವರು ಈ ಬಹಿರಂಗಪಡಿಸಿದ್ದಾರೆ.
ರಷ್ಯಾಕ್ಕೆ ಪ್ರಧಾನಿ ಮೋದಿಯವರ ಎರಡು ಭೇಟಿಗಳ ನಂತರ ಈಗ ನಮ್ಮ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಜುಲೈ 8ರಂದು ಮತ್ತು ಅಕ್ಟೋಬರ್ 22&23ರಂದು ರಷ್ಯಾಕ್ಕೆ ಭೇಟಿ ನೀಡಿದ್ದರು. ರಷ್ಯಾ ಮತ್ತು ಯೂಕ್ರೇನ್ ನಡುವೆ ಶಾಂತಿ ನೆಲೆಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ. ಈ ವಿಚಾರವಾಗಿ ನಾವು ಭಾರತ, ಚೀನಾ ಮತ್ತು ಬ್ರೆಜಿಲ್ ಜತೆ ಸಂಪರ್ಕದಲ್ಲಿದ್ದೇವೆ ಎಂದು ಸ್ವತಃ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿದ್ದಾರೆ. ಯೂಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ವರ್ಷಾಂತ್ಯದ ವೇಳೆಗೆ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.