ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಲು ಸೊರೇನ್‌ಗೆ ಅನುಮತಿ ನಿರಾಕರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರದಿಂದ ಜಾರ್ಖಂಡ್‌ನಲ್ಲಿ ಆರಂಭವಾಗುವ ರಾಜ್ಯ ಬಜೆಟ್‌ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿದ್ದ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೊರೇನ್‌ ಅವರನ್ನು ಜಾರಿ ನಿರ್ದೇಶನಾಲಯ ಜನವರಿ 31ರಂದು ಬಂಧಿಸಿತ್ತು.

ಇ.ಡಿ ಕಸ್ಟಡಿ ಅವಧಿ ಮುಗಿದ ಬಳಿಕ ಫೆ.15ರಂದು ಸೊರೇನ್‌ ಅವರನ್ನು ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಫೆ. 5ರಂದು ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆ ವೇಳೆ ಭಾಗವಹಿಸಲು ಸೊರೇನ್‌ ಅವರಿಗೆ ಈ ಹಿಂದೆ ನ್ಯಾಯಾಲಯ ಅವಕಾಶ ನೀಡಿತ್ತು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!