ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯಾ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಡೀಗಢ ಮತ್ತು ಅರುಣಾಚಲ ಪ್ರದೇಶದಲ್ಲೂ ಮಹಿಳಾ ಮುಖ್ಯಸ್ಥರನ್ನು ನೇಮಿಸಲಾಗಿದೆ.
ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.