ಸೌಂದರ್ಯ ಜಗದೀಶ್ ಆತ್ಯಹತ್ಯೆ: ಡಿಸಿಪಿ ರಿಯಾಕ್ಷನ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ (Soundarya Jagadeesh) ಇಂದು (ಏ.14) ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

ಜಗದೀಶ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಡಿಸಿಪಿ ಸೈಯದ್ ವುಲ್ಲಾ ಅದಾವತ್ ಪ್ರತಿಕ್ರಿಯೆ ನೀಡಿದ್ದು, ಬೆಳಗ್ಗೆ 9.45ಕ್ಕೆ ಘಟನೆ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಅವರ ಪತ್ನಿ ಈಗಾಗಲೇ ದೂರು ಕೊಟ್ಟಿದ್ದಾರೆ. ಪತ್ನಿ ಕೂಡ ಇದು ಸೂಸೈಡ್ ಎಂದು ಕ್ಲೀಯರ್ ಕಟ್ ಆಗಿ ಹೇಳಿದ್ದಾರೆ ಎಂದು ಡಿಸಿಪಿ ತಿಳಿಸಿದ್ದಾರೆ.

ಇತ್ತೀಚಿಗೆ ಸೌಂದರ್ಯ ಜಗದೀಶ್ ಮಾನಸಿಕವಾಗಿ ತುಂಬಾ ನೊಂದಿದ್ದರು. ಕೆಲ ದಿನಗಳ ಹಿಂದಷ್ಟೇ ಸೌಂದರ್ಯ ಜಗದೀಶ್ ಅತ್ತೆಯ ಮೃತಪಟ್ಟಿದ್ದರು. ಅತ್ತೆಯ ಜೊತೆ ತುಂಬಾ ಉತ್ತಮ ಒಡನಾಟ ಹೊಂದಿದ್ದ ಜಗದೀಶ್, ಅತ್ತೆಯ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ. ಕೇಸ್ ದಾಖಲಿಸಿಕೊಂಡು ತನಿಖೆ ಮಾಡ್ತಾ ಇದ್ದೀವಿ ಎಂದು ಡಿಸಿಪಿ ಹೇಳಿದ್ದಾರೆ.

ಏ.15ರಂದು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!