ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಅವರ ಪತ್ನಿ ರೇಖಾ ಆರೋಪಿಸಿ ಕೇಸ್ ದಾಖಲಿಸಿದ್ದರು. ಈ ಕುರಿತು, ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಹೈಕೋರ್ಟ್ ಉದ್ಯಮದ ಪಾಲುದಾರರಾದ ವಿ.ಎಸ್ ಸುರೇಶ್, ಎಸ್ ಪಿ ಹೊಂಬಣ್ಣ, ಸುಧೀಂದ್ರ ವಿರುದ್ಧ ಕೇಸ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ತಿಂಗಳ ಬಳಿಕ ಸಿಕ್ಕಪತ್ರ ಆಧರಿಸಿ ಕೇಸ್ ದಾಖಲಿಸಲಾಗಿತ್ತು. ಆತ್ಮಹತ್ಯೆ ಪತ್ರದಲ್ಲಿ ಪ್ರಚೋದನೆ ಬಗ್ಗೆ ಆರೋಪವಿಲ್ಲ ಕೇಸ್ ರದ್ದುಪಡಿಸುವಂತೆ ಮೂವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.ಇದೀಗ ಹೈಕೋರ್ಟ್ ವಿಚಾರಣೆ ನಡೆಸಿ ಪ್ರಕರಣವನ್ನು ರದ್ದುಪಡಿಸಿ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಆದೇಶದಲ್ಲಿನ ಅಭಿಪ್ರಾಯ ಇವರ ನಡುವಿನ ಬೇರೆ ವಿವಾದಗಳಿಗೆ ಅನ್ವಯವಾಗುವುದಿಲ್ಲ ಎಂದು ನ್ಯಾ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಹೇಳಿದೆ.
ಉದ್ಯಮದಲ್ಲಿ ಆದ ನಷ್ಟದಿಂದಲೇ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕುರಿತು ಸೌಂದರ್ಯ ಜಗದೀಶ್ ಅವರ ಪತ್ನಿ ರೇಖಾ ಕಳೆದ ಮೇ 24 ರಂದು ಸುದ್ದಿಗೋಷ್ಠಿ ಕರೆದು ಮಾತನಾಡಿ, ಸೌಂದರ್ಯ ಜಗದೀಶ್ ಅವರ ಪಾಲುದಾರರು ಕೆಲವರ ವಿರುದ್ಧ ಆರೋಪಗಳನ್ನು ಮಾಡಿದ್ದರು.